Mankutimmana Kagga by D.V. Gundappa
ನಗುಮನದಿ ಲೋಗರ ವಿಕಾರಂಗಳನು ನೋಡಿ । ಬಿಗಿ ತುಟಿಯ ದುಡಿವಂದು ನೋವಪಡುವಂದು ॥ ಪೊಗು ವಿಶ್ವಜೀವನದ ಜೀವಾಂತರಂಗದಲಿ । ನಗುನಗುತ ಬಾಳ್, ತೆರಳು - ಮಂಕುತಿಮ್ಮ ॥ ೭೨೮ ॥
nagu manadi lOgara vikArangaLanu nODi । bigi tuTiya duDivandu nOvupaDuvandu ॥ pogu viShvajIvanada jIvAntarangadali । nagunaguta bAL, teraLu - Mankutimma ॥ 728 ॥
ಲೋಕದ ವಿಚಿತ್ರಗಳ ಮತ್ತು ಲೋಕದ ಜನರ ವಿಚಿತ್ರ ನಡವಳಿಕೆಯನ್ನು ಕಂಡು, ಮನದಲ್ಲೇ ನಕ್ಕುಬಿಡು. ನಿನಗೆ ಕಷ್ಟ ಬಂದು ತೀವ್ರ ಹೋರಾಟ ನಡೆಸಬೇಕಾದಾಗ ಮೌನವಾಗಿ ಅನುಭವಿಸು, ಜಗವೆಲ್ಲವನು ‘ಏಕಾತ್ಮ’ಭಾವದಲಿ ನೋಡುತ್ತಾ ನಗುನಗುತ್ತಾ ಬಾಳು ಮತ್ತು ನಗುನಗುತ್ತಲೇ ಇಲ್ಲಿಂದ ತೆರಳು ಎಂದು ಸಂತೋಷದಿಂದ ಬದುಕುವ ಮತ್ತು ನಿರ್ಗಮಿಸುವ ಉಪಾಯವನ್ನು ನಮಗೆ ತಿಳಿಸಿದ್ದಾರೆ, ಮಾನ್ಯ ಗುಂಡಪ್ಪನವರು ಈ ಮುಕ್ತಕದಲ್ಲಿ.
When you see the distortions of the world, laugh it off - but internally only. When you are working hard or in pain, hold your lips (tongue). Do not speak to every one about it. At the same time, do not distance yourself from the world. Mingle with the world and live life to the fullest. Laugh and be happy always. When it is over, leave the world without much fanfare. - Mankutimma
Video Coming Soon
Detailed video explanations by scholars and experts will be available soon.