Back to List

Kagga 82 - Mankutimmana Kagga

Mankutimmana Kagga by D.V. Gundappa

Original Text (ಕನ್ನಡ)

ಬನ್ನಿರಾಡುವ ಕಣ್ಣ ಮುಚ್ಚಾಲೆಯಾಟವನು । ಎನ್ನನರಸಿರಿ ಬನ್ನಿ ಮಕ್ಕಳಿರ ಬೇಗ ॥ ಬನ್ನಿರಾಟವ ಬೇಡವೆಂಬರನು ನಾಂ ಬಿಡೆನು । ಎನ್ನುವಜ್ಜಿಯೊ ಬೊಮ್ಮ - ಮಂಕುತಿಮ್ಮ ॥ ೮೨ ॥

bannirADuva kaNNa mucchAleyATavanu । ennanarasiri banni makkaLira bEga ॥ banniri ATava bEDavembaranu nAm biDenu । ennuva ajjiyo bomma - Mankutimma ॥ 82 ॥

Meaning in Kannada

ಹಿಂದಿನ ಕಾಲದ ಅವಿಭಕ್ತ ಕುಟುಂಬಗಳಲ್ಲಿ ಯುವತಿಯರು ಮತ್ತು ವಯಸ್ಕರು ಕೆಲಸಗಳಲ್ಲಿ ಮಗ್ನರಾಗಿದ್ದರೆ ವಯಸ್ಸಾದ ಅಜ್ಜಿಯರು ಮಕ್ಕಳನ್ನು ಆಡಿಸಿಕೊಳ್ಳಲು, ಕಣ್ಣಾ ಮುಚ್ಚಾಲೆ ಆಟವಾಡಿಸುತ್ತಿದ್ದರು. ಅದು ಅವರಿಗೂ ಕಾಲಯಾಪನೆಗೆ ಒಂದು ದಾರಿಯಾಗುತ್ತಿತ್ತು. ಅಜ್ಜಿಯರು ಎಲ್ಲರನ್ನೂ ಸೇರಿಸಿಕೊಂಡು ಆಡುತ್ತಿದ್ದರು. ಯಾರನ್ನೂ ಬಿಡುತ್ತಿರಲಿಲ್ಲ. ಅದರಂತೆ ಕಂಡೂ ಕಾಣದಂತೆ ಎದುರಿಗಿದ್ದರೂ ಬಚ್ಚಿಟ್ಟುಕೊಂಡಂತೆ ಇರುವ ಆ ಪರಮಾತ್ಮನನ್ನು ಹುಡುಕುವಂತೆ ನಮ್ಮನ್ನು ಕರೆಯುತ್ತಿದ್ದಾನೇನು ಆ ಪರಬ್ರಹ್ಮ, ಎಂದು ಕೇಳುತ್ತಾರೆ ಮಾನ್ಯ ಗುಂಡಪ್ಪನವರು. 

Meaning & Interpretation

An old lady calls all the kids to play hide-and-seek. She taunts all of them to find her. She will not accept if any one declines to play the game. The creator is like her engaging all of us in this grand game of hide-and-seek called life. - Mankutimma

Themes

Life

Video Section

Video Coming Soon

Detailed video explanations by scholars and experts will be available soon.