Mankutimmana Kagga by D.V. Gundappa
ವಹಿಸು ಕೆಲ ಭಾರಗಳ; ಸಹಿಸು ಕೆಲ ನೋವುಗಳ । ಪ್ರಹರಿಸರಿಗಳನನಿತು ಯುಕ್ತಗಳನರಿತು ॥ ಮಹಿಯ ನಾಟಕದಿ ನೀಂ ಮನಸಿಟ್ಟು ಕುಣಿಕುಣಿದು । ವಿಹರಿಸಾತ್ಮಾಲಯದಿ- ಮಂಕುತಿಮ್ಮ ॥ ೯೦೪ ॥
vahisu kela bhAragaLa; sahisu kela nOvugaLa । praharisu arigaLanu anitu yuktagaLanu aritu ॥ mahiya nATakadi nIm manasiTTu kuNikuNidu । viharisu aatmAlayadi - Mankutimma ॥ 904 ॥
ಬದುಕಿನಲ್ಲಿ ಕೆಲವು ಭಾರಗಳನ್ನು ಹೊತ್ತುಕೋ, ಕೆಲವು ನೋವುಗಳನ್ನು ಸಹಿಸಿಕೋ, ನಿನ್ನ ಶತ್ರುಗಳನ್ನು ಆದಷ್ಟು ಬಗ್ಗುಬಡಿ, ಬದುಕುವಾಗ ಯುಕ್ತ-ಅಯುಕ್ತಗಳನ್ನು ಅರಿತು, ನಿನಗೆ ವಹಿಸಿದ ಈ ಭೂಮಿಯ ಮೇಲಿನ ನಾಟಕದಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡು, ನಿನ್ನ ಪಾತ್ರವನ್ನು ವಹಿಸು. ಹಾಗೆ ಮಾಡುವಾಗ ನೀನು ಆತ್ಮದ ಆಲಯದಲ್ಲಿ ವಿಹರಿಸು ಎನ್ನುತ್ತಾರೆ ಮಾನ್ಯ ಗುಂಡಪ್ಪನವರು ಈ ಮುಕ್ತಕದಲ್ಲಿ.
Shoulder some responsibilities. Suffer some pain. Attack your enemies a bit. While doing so, never lose sight of right and wrong. Dance well in the drama of this world. Lead a happy dancing life in your palace of the soul. - Mankutimma
Video Coming Soon
Detailed video explanations by scholars and experts will be available soon.