ಪಟ್ಟಿಗೆ ಹಿಂತಿರುಗಿ

ಕಗ್ಗ 123 - ಮಂಕುತಿಮ್ಮನ ಕಗ್ಗ

ಮಂಕುತಿಮ್ಮನ ಕಗ್ಗ by D.V. Gundappa

ಮೂಲ ಪಠ್ಯ (ಕನ್ನಡ)

ಬನ್ನಬವಣೆಗಳ ತಾನೆನಿತೆನಿತು ಪಟ್ಟಿರೆಯು । ಮಿನ್ನೊಮ್ಮೆ ಮತ್ತೊಮ್ಮೆ ಹೊಸ ಸಾಹಸಗಳಿಂ ॥ ಸನ್ನಹಿಸುವಂ ಸುಮ್ಮನಿರಲೊಲದೆ ಮಾನವನು । ಚಿನ್ಮಯತೆಯಾತ್ಮಗುಣ - ಮಂಕುತಿಮ್ಮ ॥ ೧೨೩ ॥

banna bavaNegaLa tAnu enitenitu pattireyum । innomme mattomme hosa sAhasagaLim ॥ sannahisuvam summaniralu olade mAnavanu । chinmayate AtmaguNa - Mankutimma ॥ 123 ॥

ಕನ್ನಡದಲ್ಲಿ ಅರ್ಥ

ಮನುಷ್ಯ ಎಷ್ಟೊಂದು ಕಷ್ಟ ಅನುಭವಿಸಿದರೂ, ಸೋಲನ್ನು ಅನುಭವಿಸಿದರೂ, ತೊಂದರೆಗಳನ್ನು ಎದುರಿಸದರೂ, ಮತ್ತೆ ಮತ್ತೆ ಪ್ರಯತ್ನವನ್ನು ಮಾಡುತ್ತಲೇ ಇರುತ್ತಾನೆ, ಹೊಸ ಹೊಸ ಸಾಹಸಗಳನ್ನು ಮಾಡುತ್ತಲೇ ಇರುತ್ತಾನೆ. ಸುಮ್ಮನಿರಲಾಗದಿರುವುದು ಮನುಷ್ಯನಲ್ಲಿರುವ ಜ್ಞಾನಸ್ವಾರೂಪವಾದ ಆತ್ಮದ ಗುಣವೆಂದು ಮಾನ್ಯ ಗುಂಡಪ್ಪನವರು ಈ ಕಗ್ಗದಲ್ಲಿ ಪ್ರಸ್ತಾಪ ಮಾಡುತ್ತಾರೆ.

ಅರ್ಥ ಮತ್ತು ವ್ಯಾಖ್ಯಾನ

"Man faces a lot of miseries and troubles in his work. But he always bounces back with a more vigor and a new endeavours. He is not the one who can remain silent when troubled. Why does he do all this when all he can think is right with him? - 'chit' (mind) is the nature of the atma (soul) that is residing in him." - Mankutimma

ವಿಷಯಗಳು

DeathMoralitySufferingNatureDuty

ವೀಡಿಯೊ ವಿಭಾಗ

ವೀಡಿಯೊ ಶೀಘ್ರದಲ್ಲಿ ಬರುತ್ತಿದೆ

ಪಂಡಿತರು ಮತ್ತು ತಜ್ಞರಿಂದ ವಿವರವಾದ ವೀಡಿಯೊ ವಿವರಣೆಗಳು ಶೀಘ್ರದಲ್ಲಿ ಲಭ್ಯವಾಗುತ್ತದೆ.