ಪಟ್ಟಿಗೆ ಹಿಂತಿರುಗಿ

ಕಗ್ಗ 126 - ಮಂಕುತಿಮ್ಮನ ಕಗ್ಗ

ಮಂಕುತಿಮ್ಮನ ಕಗ್ಗ by D.V. Gundappa

ಮೂಲ ಪಠ್ಯ (ಕನ್ನಡ)

ಒಳಿತೆಂದು ಸೊಗಸೆಂದು ಜಗವು ಮೆಚ್ಚುವುದೆಲ್ಲ । ಕಲೆ ಕಣಂಗಳು ಮಾತ್ರ ಪೂರ್ಣಂಗಳಲ್ಲ ॥ ನಲಿವು ಚೆಲುವುಗಳ ಪರಿಪೂರ್ಣ ಮೂಲಾಕೃತಿಯೆ । ಪರಬೊಮ್ಮನೆನ್ನುವರು - ಮಂಕುತಿಮ್ಮ ॥ ೧೨೬ ॥

oLitendu sogasendu jagavu mecchuvudella । kale kaNangalu mAtra pUrNangaLella ॥ nalivu cheluvugaLa paripUrNa mUlAkrUtiye । parabommanu ennuvuru - Mankutimma ॥ 126 ॥

ಕನ್ನಡದಲ್ಲಿ ಅರ್ಥ

ಈ ಜಗತ್ತಿನಲ್ಲಿ ನಾವು ” ಇದು ಒಳ್ಳೆಯದು” ” ಇದು ಸೊಗಸು” ಎಂದು ಮೆಚ್ಚುವುದೆಲ್ಲ ಆ ಪರಮಾತ್ಮನ ಸಂಪೂರ್ಣ ರೂಪವಲ್ಲ, ಕೇವಲ ಪಾರ್ಶ್ವರೂಪ. ನಲಿವು ಚೆಲುವುಗಳ ಪರಿಪೂರ್ಣ ರೂಪವೇ ಆ ಪರಮಾತ್ಮ ಎನ್ನುತ್ತಾರೆ ಮಾನ್ಯ ಗುಂಡಪ್ಪನವರು ಈ ಕಗ್ಗದಲ್ಲಿ.

ಅರ್ಥ ಮತ್ತು ವ್ಯಾಖ್ಯಾನ

"Man appreciates his world - good, amazing. These are all just portions and particles of the whole - never the same as the complete. People call the 'whole' essence complete with all happiness and beauty as the Creator (God)." - Mankutimma

ವಿಷಯಗಳು

DevotionLifeMoralitySociety

ವೀಡಿಯೊ ವಿಭಾಗ

ವೀಡಿಯೊ ಶೀಘ್ರದಲ್ಲಿ ಬರುತ್ತಿದೆ

ಪಂಡಿತರು ಮತ್ತು ತಜ್ಞರಿಂದ ವಿವರವಾದ ವೀಡಿಯೊ ವಿವರಣೆಗಳು ಶೀಘ್ರದಲ್ಲಿ ಲಭ್ಯವಾಗುತ್ತದೆ.