ಪಟ್ಟಿಗೆ ಹಿಂತಿರುಗಿ

ಕಗ್ಗ 186 - ಮಂಕುತಿಮ್ಮನ ಕಗ್ಗ

ಮಂಕುತಿಮ್ಮನ ಕಗ್ಗ by D.V. Gundappa

ಮೂಲ ಪಠ್ಯ (ಕನ್ನಡ)

ತಡಕಾಟ ಬದುಕೆಲ್ಲವೇಕಾಕಿಜೀವ ತ । ನ್ನೊಡನಾಡಿ ಜೀವಗಳ ತಡಕಿ ಕೈಚಾಚಿ ॥ ಪಿಡಿಯಲಲೆದಾಡುಗುಂ, ಪ್ರೀತಿ ಋಣ ಮಮತೆಗಳ । ಮಡುವೊಳೋಲಾಡುತ್ತೆ - ಮಂಕುತಿಮ್ಮ ॥ ೧೮೬ ॥

taDakATa badukellavu ekAki jIvana tanna । oDanADi jIvagaLa taDaki kaichAchi ॥ piDiyalu aledADugum, prIti RuNa mamategaLa । maDuvOL olAdutte - Mankutimma ॥ 186 ॥

ಕನ್ನಡದಲ್ಲಿ ಅರ್ಥ

ಒಂದು ಜೀವ ಬದುಕಲ್ಲಿ ಏಕಾಕಿಯಾಗಿದ್ದು ಒಡನಾಡಿ ಜೀವಗಳ ಹುಡುಕಿ ಹಿಡಿದು, ಪ್ರೀತಿ, ಕರ್ಮಶೇಷ, ಮತ್ತು ಅಪ್ಯಾಯತೆಗಳ ಬಂಧನಗಳ ಸುಳಿಯಲ್ಲಿ ಸಿಕ್ಕು ಜೀವಿಸುತ್ತದೆ ಎಂಬುದೇ ಈ ಕಗ್ಗದ ಹೂರಣ.

ಅರ್ಥ ಮತ್ತು ವ್ಯಾಖ್ಯಾನ

"Entire life is a struggle. Alone in this world, we search for partners, make them struggle in their life. We wander all over the world and stretch out our hands to hold theirs. But we get lost in the whirlpool of love, debt and compassion." - Mankutimma

ವಿಷಯಗಳು

LifeSufferingLoveWar

ವೀಡಿಯೊ ವಿಭಾಗ

ವೀಡಿಯೊ ಶೀಘ್ರದಲ್ಲಿ ಬರುತ್ತಿದೆ

ಪಂಡಿತರು ಮತ್ತು ತಜ್ಞರಿಂದ ವಿವರವಾದ ವೀಡಿಯೊ ವಿವರಣೆಗಳು ಶೀಘ್ರದಲ್ಲಿ ಲಭ್ಯವಾಗುತ್ತದೆ.