ಪಟ್ಟಿಗೆ ಹಿಂತಿರುಗಿ

ಕಗ್ಗ 191 - ಮಂಕುತಿಮ್ಮನ ಕಗ್ಗ

ಮಂಕುತಿಮ್ಮನ ಕಗ್ಗ by D.V. Gundappa

ಮೂಲ ಪಠ್ಯ (ಕನ್ನಡ)

ಪೊಡೆಯುಣಿಸ ಮಿಗಹಕ್ಕಿಹುಳುಗಳಂದದಿ ನರನು । ತಡಕುವನು; ತನ್ನಾತ್ಮದುಣಿಸ ಮರೆಯುವನು ॥ ಒಡಲಿನಬ್ಬರವೇನು? ಆತ್ಮದ ನಾಣ್ಚೇನು? । ಪೊಡವಿಗಿದೆ ದುಮ್ಮಾನ - ಮಂಕುತಿಮ್ಮ ॥ ೧೯೧ ॥

poDeyuNisa miga hakki huLugaLandadi naranu । taDakuvanu; tanna AtmaduNisa mareyuvanu ॥ oDalina abbaravEnu? Atmada nANchEnu? । poDavigide dummAna - Mankutimma ॥ 191 ॥

ಕನ್ನಡದಲ್ಲಿ ಅರ್ಥ

ಮನುಷ್ಯನು, ಪ್ರಾಣಿ, ಹಕ್ಕಿ ಹುಳುಗಳ ರೀತಿ ತನ್ನ ಹೊಟ್ಟೆಪಾಡಿಗಾಗಿ ಆಹಾರಕ್ಕಾಗಿ ತಡಕಾಡುತ್ತಾನೆ. ಆದರೆ ಆತ್ಮಕ್ಕೆ ಬೇಕಾದ ಆಹಾರವನ್ನು ಕೊಡಬೇಕಾದ ಆಹಾರವನ್ನು ಕೊಡದೆ, ಅದನ್ನು ಸೊರಗಿಸುತ್ತಿದ್ದಾನೆ. ತೆಜೋರೂಪವಾದ ಆತ್ಮವು ಕಡೆಗಣಿಸಲ್ಪಟ್ಟಿದೆ. ಇದು ತೀರ ದುಃಖದ ವಿಚಾರ ಎಂದು ಮಾನ್ಯ ಗುಂಡಪ್ಪನವರು ಈ ಕಗ್ಗದಲ್ಲಿ ಪ್ರಸ್ತಾಪಮಾಡಿದ್ದಾರೆ.

ಅರ್ಥ ಮತ್ತು ವ್ಯಾಖ್ಯಾನ

"When the body gets hungry, we struggle to find food just like the animals, birds or worms. Man usually forgets the hunger of the soul. This is because the body make a lot of noise when it is hungry. But the sould does not. Yet ultimately, it is the body that suffers" - Mankutimma

ವಿಷಯಗಳು

SufferingWar

ವೀಡಿಯೊ ವಿಭಾಗ

ವೀಡಿಯೊ ಶೀಘ್ರದಲ್ಲಿ ಬರುತ್ತಿದೆ

ಪಂಡಿತರು ಮತ್ತು ತಜ್ಞರಿಂದ ವಿವರವಾದ ವೀಡಿಯೊ ವಿವರಣೆಗಳು ಶೀಘ್ರದಲ್ಲಿ ಲಭ್ಯವಾಗುತ್ತದೆ.