ಪಟ್ಟಿಗೆ ಹಿಂತಿರುಗಿ

ಕಗ್ಗ 199 - ಮಂಕುತಿಮ್ಮನ ಕಗ್ಗ

ಮಂಕುತಿಮ್ಮನ ಕಗ್ಗ by D.V. Gundappa

ಮೂಲ ಪಠ್ಯ (ಕನ್ನಡ)

ಪದರಪದರಗಳಿಹುವು ಗಂಟುಗಂಟುಗಳಿಹುವು । ಹೃದಯದಲಿ ಬುದ್ಧಿಯಲಿ ವಾಕ್ಚರ್ಯೆಗಳಲಿ ॥ ಇದಮಿತ್ಥಮೆಲ್ಲಿಹುದು ಮನುಜಸ್ವಭಾವದಲಿ? । ವಿಧಿಯ ಕೈಚಿತ್ರವದು - ಮಂಕುತಿಮ್ಮ ॥ ೧೯೯ ॥

padara padaragaLihuvu ganTu ganTugaLihuvu । hRudayadali buddhiyali vAkcharyegaLali ॥ idam ittham ellihudu manuja svabhAvadali? । vidhiya kai chitravadu - Mankutimma ॥ 199 ॥

ಕನ್ನಡದಲ್ಲಿ ಅರ್ಥ

ಮನುಷ್ಯನ ಹೃದಯದ ಮತ್ತು ಬುದ್ಧಿಯ ಭಾವಗಳು, ಅವನ ಮಾತುಗಳು ಮತ್ತು ಕೃತಿಗಳು ಗೋಜಲು ಗೋಜಲಾಗಿಯೂ ಸಿಕ್ಕು ಸಿಕ್ಕಾಗಿ ಗಂಟಾಗಿಯೂ ಇವೆ. ಮನುಷ್ಯರ ಸ್ವಭಾವ ” ಹೇಗೇ ” ಎಂದು ಹೇಳಲಾಗದು. ಬಹುಷಃ ಇದು ವಿಧಿಯ ಕ್ರಮದಿಂದಾದ ಚಿತ್ರವಿರಬಹುದು ಎಂದು ಮಾನ್ಯ ಗುಂಡಪ್ಪನವರು ಪ್ರಸ್ತಾಪಿಸುತ್ತಾರೆ.

ಅರ್ಥ ಮತ್ತು ವ್ಯಾಖ್ಯಾನ

"There are many folds and knots in everyone's heart, mind and speech. Can a man's nature be known/predicted deterministically? It's all like a picture drawn by the hands of Providence." - Mankutimma

ವಿಷಯಗಳು

NatureLove

ವೀಡಿಯೊ ವಿಭಾಗ

ವೀಡಿಯೊ ಶೀಘ್ರದಲ್ಲಿ ಬರುತ್ತಿದೆ

ಪಂಡಿತರು ಮತ್ತು ತಜ್ಞರಿಂದ ವಿವರವಾದ ವೀಡಿಯೊ ವಿವರಣೆಗಳು ಶೀಘ್ರದಲ್ಲಿ ಲಭ್ಯವಾಗುತ್ತದೆ.