ಪಟ್ಟಿಗೆ ಹಿಂತಿರುಗಿ

ಕಗ್ಗ 212 - ಮಂಕುತಿಮ್ಮನ ಕಗ್ಗ

ಮಂಕುತಿಮ್ಮನ ಕಗ್ಗ by D.V. Gundappa

ಮೂಲ ಪಠ್ಯ (ಕನ್ನಡ)

ದಿನದಿನವು ಹಳಸುವುವು, ದಿನದಿನವು ಕೊಳೆಯುವುವು । ಮನುಜಕುಲದೆಲ್ಲ ಕೃತಿವಿಜಯವಿಭವಗಳು ॥ ಅನುದಿನವು ಮತ್ತವನು ತೊಳೆದು ಹೊಸತೆನಿಸುವುದೆ । ಜನುಮಸಫಲತೆ ನಿನಗೆ - ಮಂಕುತಿಮ್ಮ ॥ ೨೧೨ ॥

dina dinavu haLasuvuvu, dina dinavu koLeyuvuvu । manujakulada ella kruti vijaya vibhavagaLu ॥ anudinavu mattavanu toLedu hosatenisuvude । janumasaphalate ninage - Mankutimma ॥ 212 ॥

ಕನ್ನಡದಲ್ಲಿ ಅರ್ಥ

ಮನುಷ್ಯನ ಕೆಲಸಗಳು, ಸಾಧನೆಗಳು ಮತ್ತು ಅದರ ವೈಭವಗಳು ದಿನ ಕಳೆದಂತೆ ಹಳತಾಗುತ್ತಾ ಹೋಗುತ್ತದೆ ಮತ್ತು ಹಳಸುತ್ತಾ, ಕೊಳೆಯುತ್ತಾ ಹೋಗುತ್ತದೆ. ಅಂತಹ ಹಳಸಿದ ಮತ್ತು ಕೊಳೆತ ಸಾಧನೆಗಳನ್ನು ಮತ್ತೆ ತೊಳೆದು ಹೊಳಪನ್ನು ನೀಡುವುದೇ ನೀನು ಸಾಧಿಸುವ ಸಫಲತೆ, ಹೇ ! ಮಾನವ ಎಂದು ಉದ್ಘಾರವನ್ನು ತೆಗೆಯುತ್ತಾರೆ ಮಾನ್ಯ ಗುಂಡಪ್ಪನವರು ಈ ಕಗ್ಗದಲ್ಲಿ.

ಅರ್ಥ ಮತ್ತು ವ್ಯಾಖ್ಯಾನ

"Everyday they become stale and decay. All mankind's achievements are temporary; his works, his victories and his wealth. Your life's satisfaction must lie in the action of cleaning yesterday's stale and making them today's new." - Mankutimma

ವಿಷಯಗಳು

LifePeaceDuty

ವೀಡಿಯೊ ವಿಭಾಗ

ವೀಡಿಯೊ ಶೀಘ್ರದಲ್ಲಿ ಬರುತ್ತಿದೆ

ಪಂಡಿತರು ಮತ್ತು ತಜ್ಞರಿಂದ ವಿವರವಾದ ವೀಡಿಯೊ ವಿವರಣೆಗಳು ಶೀಘ್ರದಲ್ಲಿ ಲಭ್ಯವಾಗುತ್ತದೆ.