ಪಟ್ಟಿಗೆ ಹಿಂತಿರುಗಿ

ಕಗ್ಗ 23 - ಮಂಕುತಿಮ್ಮನ ಕಗ್ಗ

ಮಂಕುತಿಮ್ಮನ ಕಗ್ಗ by D.V. Gundappa

ಮೂಲ ಪಠ್ಯ (ಕನ್ನಡ)

ತಿರುತಿರುಗಿ ತೊಳಲುವುದು ತಿರಿದನ್ನವುಣ್ಣುವುದು । ಮೆರೆದು ಮೈಮರೆಯುವುದು ಹಲ್ಲ ಕಿರಿಯುವುದು ॥ ಮರಳಿ ಕೊರಗಾಡುವುದು ಕೆರಳುವುದು ನರಳುವುದು । ಇರವಿದೇನೊಣರಗಳೆ? - ಮಂಕುತಿಮ್ಮ ॥ ೨೩ ॥

tirutirugi tolaLuvudu tiridannavuNNuvudu । meredu maimareyuvudu halla kiriyuvudu ॥ maraLi koragADuvudu kereLuvudu naraLuvudu । iravidEnoNaragaLe? - Mankutimma ॥ 23 ॥

ಕನ್ನಡದಲ್ಲಿ ಅರ್ಥ

ಮತ್ತೆ ಮತ್ತೆ ಮನುಷ್ಯ ಪರದಾಡುವುದು, ನಾವು ಎಲ್ಲ ಕಡೆಯೂ ಕಾಣಬಹುದು. ಪರದಾಡಿ ಅವರಿವರನ್ನು ಕಾಡಿ ಬೇಡಿ ಹೊಟ್ಟೆ ತುಂಬಿಸಿಕೊಳ್ಳುವುದು. ಪಡೆದದ್ದು ಹೆಚ್ಚಾದರೆ ಮೆರೆದು ಅಹಂಕಾರ ತೋರಿಸುವುದು. ತಮ್ಮನ್ನು ತಾವು, ಬಹಳ ಸಾಧಿಸಿದೆವೆಂದು ಅಹಂಕಾರದಿಂದ ಮೆರೆಯುವುದು., ಪಡೆದದ್ದನ್ನು ಉಳಿಸಿಕೊಳ್ಳಲು ಅವರಿವರ ಮುಂದೆ ಹಲ್ಲು ಕಿರಿಯುವುದು, ಗಿಂಜುವುದು, ಬೇಡುವುದು ನಾವು ಸರ್ವೇ ಸಾಮಾನ್ಯವಾಗಿ ಎಲ್ಲರಲ್ಲೂ ಕಾಣುತ್ತೇವೆ. ತಾವು ಅಂದುಕೊಂಡದ್ದು ಸಿಗದಿದ್ದ್ದರೆ ಕೋಪಗೊಳ್ಳುವುದು,ಹಾಗೂ ಸಿಗದಿದ್ದರೆ, ಕೈಲಾಗತನದಿಂದ ಸಂಕಟಪಡುವುದು ಅಥವಾ ನರಳುವುದು, ಇದನೆಲ್ಲಾ ಮಾನ್ಯ ಡಿ.ವಿ.ಜಿ.ಯವರು ಸತ್ವವಿಲ್ಲದ ಒಣ ರಗಳೆ ಅಥವಾ ಸತ್ವವಿಲ್ಲದ ಜೀವನದ ಪರಿ ಎಂದು ಈ ಕಗ್ಗದಲ್ಲಿ ಸೂಚ್ಯವಾಗಿ ಹೇಳುತ್ತಾರೆ.

ಅರ್ಥ ಮತ್ತು ವ್ಯಾಖ್ಯಾನ

Is this is all existence all about these dry emotions (irritations)- wandering restlessly, eating what ever you find, flaunting what ever little wealth on has, dreaming, hating people, lamenting, getting angry, suffering. - Mankutimma

ವಿಷಯಗಳು

LifeSufferingSocietyLovePeace

ವೀಡಿಯೊ ವಿಭಾಗ

ವೀಡಿಯೊ ಶೀಘ್ರದಲ್ಲಿ ಬರುತ್ತಿದೆ

ಪಂಡಿತರು ಮತ್ತು ತಜ್ಞರಿಂದ ವಿವರವಾದ ವೀಡಿಯೊ ವಿವರಣೆಗಳು ಶೀಘ್ರದಲ್ಲಿ ಲಭ್ಯವಾಗುತ್ತದೆ.