ಮಂಕುತಿಮ್ಮನ ಕಗ್ಗ by D.V. Gundappa
ಬೀಳುವುದ ನಿಲ್ಲಿಪುದು, ಬಿದ್ದುದನು ಕಟ್ಟುವುದು । ಹಾಲೊಡೆಯೆ ಕಡೆದದನು ತಕ್ರವಾಗಿಪುದು ॥ ಹಾಳ ಹಾಳಾಗಿಪುದು, ಹಳದ ಹೊಸತಾಗಿಪುದು । ಬಾಳಿಗಿದೆ ಚಿರಧರ್ಮ - ಮಂಕುತಿಮ್ಮ ॥ ೨೩೨ ॥
bILuvuda nillipudu, biddudanu kaTTuvudu । hAloDeye kadedu adanu takravAgipudu ॥ hALa hALAgipudu, haLada hosatAgipudu । bALigide chira dharma - Mankutimma ॥ 232 ॥
ಬೀಳುವುದನ್ನು ಎತ್ತಿ ನಿಲ್ಲಿಸುವುದು, ಬಿದ್ದುದ್ದನ್ನು ಕಟ್ಟಿ ನಿಲ್ಲಿಸುವುದು, ಹಾಲು ಒಡೆದರೆ( ಮೊಸರಾದರೆ) ಅದನ್ನು ಕಡೆದು ಮಜ್ಜಿಗೆಯನ್ನಾಗಿಸುವುದು, ಯಾವುದಾರೂ ವಸ್ತು ಹಾಳಾದರೆ ಹಾಗೆಯೇ ಬಿಡುವುದು, ಹಳತನ್ನು ಹೊಸದಾಗಿಸುವುದು, ಮುಂತಾದ ಕೆಲಸಗಳನ್ನು ಮಾಡುವುದೇ ಮಾನವನ ಬಾಳಿಗೆ ಶಾಶ್ವತ ಧರ್ಮ ಎನ್ನುತ್ತಾರೆ ಮಾನ್ಯ ಗುಂಡಪ್ಪನವರು ಈ ಕಗ್ಗದಲ್ಲಿ.
"These are the only the antics of mankind. Stopping things from going bad, reconstructing things that fall apart. If milk gets spoilt, they churn it and make curds from it. Letting a few things spoil. Renewing the spoilt things by making something new from it." - Mankutimma
ವೀಡಿಯೊ ಶೀಘ್ರದಲ್ಲಿ ಬರುತ್ತಿದೆ
ಪಂಡಿತರು ಮತ್ತು ತಜ್ಞರಿಂದ ವಿವರವಾದ ವೀಡಿಯೊ ವಿವರಣೆಗಳು ಶೀಘ್ರದಲ್ಲಿ ಲಭ್ಯವಾಗುತ್ತದೆ.