ಪಟ್ಟಿಗೆ ಹಿಂತಿರುಗಿ

ಕಗ್ಗ 233 - ಮಂಕುತಿಮ್ಮನ ಕಗ್ಗ

ಮಂಕುತಿಮ್ಮನ ಕಗ್ಗ by D.V. Gundappa

ಮೂಲ ಪಠ್ಯ (ಕನ್ನಡ)

ಸೃಷ್ಟಿಯ ವಿಧಾನದಲಿ ಸೊಟ್ಟಗಳು ನೂರಿಹುವು । ನೆಟ್ಟಗಿಪೆನ್ ಅವನ್ ಎಂದು ನರರ ಚಿರದೀಕ್ಷೆ ॥ ಇಷ್ಟಗಳನನ್ಯೋನ್ಯವವರೇಕೆ ಬಗೆದಿರರು? । ನಿಷ್ಠುರಪ್ರಿಯರವರು - ಮಂಕುತಿಮ್ಮ ॥ ೨೩೩ ॥

sRuShTiya vidhAnadali soTTagaLu nUrihuvu । neTTagipen avan endu narara chira dIkShe ॥ iShTagaLanu anyOnyavavarEke bagediraru? । niShThUra priyaravaru - Mankutimma ॥ 233 ॥

ಕನ್ನಡದಲ್ಲಿ ಅರ್ಥ

ಈ ಜಗತ್ತಿನ ಸೃಷ್ಟಿಯ ವಿಧಾನದಲ್ಲಿ ನೂರಾರು ಸೊಟ್ಟುಗಳು ಅಂದರೆ ಅಂಕು ಡೊಂಕುಗಳು ಇವೆ. ಅದನ್ನು ನೆರವಾಗಿಸಬೇಕೆನ್ನುವುದೇ ಮಾನವನ ಸದಾಕಾಲದ ಇಚ್ಛೆ. ಮನುಷ್ಯರು ಪರಸ್ಪರ ಇಚ್ಛೆಗಳನ್ನು ಅರಿಯಲು ವಿಫಲರಾಗುತ್ತಾರೆ . ಆದರೆ ಜಗತ್ತಿನ ಸೊಟ್ಟಗಳನ್ನು ಸರಿಪಡಿಸಲು ಮನುಷ್ಯ ಮಾಡುವ ಪ್ರಯತ್ನದಲ್ಲಿ ತಾನೂ ನಿಷ್ಠುರನಾಗಿ, ಅನ್ಯರೊಡನೆ ಹಗೆತನವನ್ನು ಕಟ್ಟಿಕೊಳ್ಳುತ್ತಾನೆ ಎಂದು ಉಲ್ಲೇಖ ಮಾಡಿದ್ದಾರೆ ಮಾನ್ಯ ಗುಂಡಪ್ಪನವರು ಈ ಕಗ್ಗದಲ್ಲಿ.

ಅರ್ಥ ಮತ್ತು ವ್ಯಾಖ್ಯಾನ

"There are hundred things crooked in the ways of nature. Collectively mankind has taken a vow to correct them all. But individually their desires are all inter-related and often contradicts with that of others. But many times, the opposites do come together by attraction." - Mankutimma

ವಿಷಯಗಳು

NatureSociety

ವೀಡಿಯೊ ವಿಭಾಗ

ವೀಡಿಯೊ ಶೀಘ್ರದಲ್ಲಿ ಬರುತ್ತಿದೆ

ಪಂಡಿತರು ಮತ್ತು ತಜ್ಞರಿಂದ ವಿವರವಾದ ವೀಡಿಯೊ ವಿವರಣೆಗಳು ಶೀಘ್ರದಲ್ಲಿ ಲಭ್ಯವಾಗುತ್ತದೆ.