ಪಟ್ಟಿಗೆ ಹಿಂತಿರುಗಿ

ಕಗ್ಗ 294 - ಮಂಕುತಿಮ್ಮನ ಕಗ್ಗ

ಮಂಕುತಿಮ್ಮನ ಕಗ್ಗ by D.V. Gundappa

ಮೂಲ ಪಠ್ಯ (ಕನ್ನಡ)

ಉಪ್ಪಿಷ್ಟು ಹುಳಿಯಿಷ್ಟು ಕಾರ ಸಿಹಿಯಷ್ಟಿಷ್ಟು । ಒಪ್ಪಿರ್ದೊಡದು ಭೋಜ್ಯವಂತು ಜೀವಿತಮುಂ ॥ ತಪ್ಪು ಸರಿ ಬೆಪ್ಪು ಜಾಣಂದಕುಂದುಗಳ ಬಗೆ । ಯಿಪ್ಪತ್ತು ಸೇರೆ ರುಚಿ - ಮಂಕುತಿಮ್ಮ ॥ ೨೯೪ ॥

uppiShTu huLiyiShTu kAra sihiyaShTiShTu । oppidorDe adu bhOjyavantu jIvitamuM ॥ tappu sari beppu jANa anda kundugaLa bage । yippattu sEre ruchi - Mankutimma ॥ 294 ॥

ಕನ್ನಡದಲ್ಲಿ ಅರ್ಥ

ನಾವು ಮಾಡುವ ಊಟದಲ್ಲಿಉಪ್ಪು, ಹುಳಿ, ಕಾರ, ಸಿಹಿ, ಸರಿಯಾದ ಪ್ರಮಾಣದಲ್ಲಿ ಒಪ್ಪವಾಗಿ ಇದ್ದರೆ ಹೇಗೆ ತೃಪ್ತಿಯಿಂದ ಭೋಜನಮಾಡಬಹುದು.ಹಾಗೆಯೇ ಬದುಕಿನಲ್ಲೂ ಸರಿ, ತಪ್ಪು, ಪೆದ್ದುತನ, ಜಾಣ್ಮೆ, ಅಂದ, ಕುಂದು, ಮುಂತಾದ ಹತ್ತಾರು ಬಗೆಯ ಭಾವಗಳು ಸೇರಿದರೆ ಜೀವನವೂ ನೀರಸವಾಗದೆ ‘ಸಮರಸ’ವಾಗಿರುತ್ತದೆ ಎನ್ನುತ್ತಾರೆ ಮಾನ್ಯ ಗುಂಡಪ್ಪನವರು ಈ ಕಗ್ಗದಲ್ಲಿ.

ಅರ್ಥ ಮತ್ತು ವ್ಯಾಖ್ಯಾನ

"For a tasty meal it must have a little salt, a little sour, a little hot and a little sweet - all to correct proportions. If it is not so, then how can one eat such food? Similarly, our life must be a proportional combination of mistakes, right choices, stupidity, intelligence, beauty and shortcomings. With twenty such qualities life becomes meaningful." - Mankutimma

ವಿಷಯಗಳು

LifeMorality

ವೀಡಿಯೊ ವಿಭಾಗ

ವೀಡಿಯೊ ಶೀಘ್ರದಲ್ಲಿ ಬರುತ್ತಿದೆ

ಪಂಡಿತರು ಮತ್ತು ತಜ್ಞರಿಂದ ವಿವರವಾದ ವೀಡಿಯೊ ವಿವರಣೆಗಳು ಶೀಘ್ರದಲ್ಲಿ ಲಭ್ಯವಾಗುತ್ತದೆ.