ಪಟ್ಟಿಗೆ ಹಿಂತಿರುಗಿ

ಕಗ್ಗ 35 - ಮಂಕುತಿಮ್ಮನ ಕಗ್ಗ

ಮಂಕುತಿಮ್ಮನ ಕಗ್ಗ by D.V. Gundappa

ಮೂಲ ಪಠ್ಯ (ಕನ್ನಡ)

ಇರಬಹುದು; ಚಿರಕಾಲ ಬೊಮ್ಮ ಚಿಂತಿಸಿ ದುಡಿದು । ನಿರವಿಸಿಹ ವಿಶ್ವಚಿತ್ರವ ಮರ್ತ್ಯನರನು ॥ ಅರಿತೆನಾನೆನ್ನುವಂತಾಗೆ ಕೃತಿ ಕೌಶಲದ । ಹಿರಿಮೆಗದು ಕುಂದಲ್ತೆ? - ಮಂಕುತಿಮ್ಮ ॥ ೩೫ ॥

irabahudu; chirakAla bomma chintisi duDidu । niravisiha vishvachitrada martyanaranu ॥ arite nAnu ennuvantAge kruti kaushalada । hirimege adu kundalte? - Mankutimma ॥ 35 ॥

ಕನ್ನಡದಲ್ಲಿ ಅರ್ಥ

ಬಹಳಕಾಲ ಯೋಚನೆ ಮಾಡಿ ಶ್ರಮಪಟ್ಟು ಆ ಪರಮಾತ್ಮ ಈ ಅದ್ಭುತವಾದ ಜಗತ್ತನ್ನು ನಿರ್ಮಿಸಿರುವಾಗ, ಕೆಲಕಾಲ ಬದುಕಿ ಸಾವನ್ನಪ್ಪುವ ಯಃಕಶ್ಚಿತ್ ಮಾನವನೆಂಬ ಪ್ರಾಣಿ ಇದರ ರಹಸ್ಯವನ್ನು ತಾನು ಅರಿತುಕೊಂಡು ಬಿಟ್ಟೆ ಎಂದರೆ , ತನ್ನ ಹಿರಿಮೆ, ಶ್ರಮ ಮತ್ತು ಕುಶಲತೆಗಳಿಗೆ ಕುಂದು ಅಥವಾ ಕಳಂಕ ಬಂದಂತೆ ಆಗುತ್ತದೆ ಎಂದು, ಆ ಪರಮಾತ್ಮ, ಆ ಜಗತ್ತಿನ ರಹಸ್ಯಗಳನ್ನು ಸಂಪೂರ್ಣವಾಗಿ ಮಾನವರು ಅರಿತುಕೊಳ್ಳುವ ಶಕ್ತಿಯನ್ನು ಕೊಡಲಿಲ್ಲವೋ ಏನೋ? ಎಂಬ ಕುಹಕವನ್ನಾಡುತ್ತಾರೆ, ಮಾನ್ಯ ಗುಂಡಪ್ಪನವರು.

ಅರ್ಥ ಮತ್ತು ವ್ಯಾಖ್ಯಾನ

It could be so that the Creator thought for eternity and designed this picture of the world. Would it demean his greatness any much if the mortal man is able to figure it out? - Mankutimma

ವಿಷಯಗಳು

LifeDeath

ವೀಡಿಯೊ ವಿಭಾಗ

ವೀಡಿಯೊ ಶೀಘ್ರದಲ್ಲಿ ಬರುತ್ತಿದೆ

ಪಂಡಿತರು ಮತ್ತು ತಜ್ಞರಿಂದ ವಿವರವಾದ ವೀಡಿಯೊ ವಿವರಣೆಗಳು ಶೀಘ್ರದಲ್ಲಿ ಲಭ್ಯವಾಗುತ್ತದೆ.