ಪಟ್ಟಿಗೆ ಹಿಂತಿರುಗಿ

ಕಗ್ಗ 37 - ಮಂಕುತಿಮ್ಮನ ಕಗ್ಗ

ಮಂಕುತಿಮ್ಮನ ಕಗ್ಗ by D.V. Gundappa

ಮೂಲ ಪಠ್ಯ (ಕನ್ನಡ)

ಅವತರಿಸಿಹನು ಬೊಮ್ಮ ವಿಶ್ವದೇಹದೊಳೆನ್ನೆ । ಅವನ ವೇಷಗಳೇಕೆ ಮಾರ್ಪಡುತಲಿಹವು? ॥ ತವಕಪಡನೇತಕೋ ಕುರುಹ ತೋರಲು ನಮಗೆ । ಅವಿತುಕೊಂಡಿಹುದೇಕೋ? - ಮಂಕುತಿಮ್ಮ ॥ ೩೭ ॥

avatarisihanu bomma vishvadEhadoLenne । avana vEShagaLEke mArpaDutalihavu? ॥ tavakapaDanu EtakO kuruha tOralu namage । avitukonDihudEkO? - Mankutimma ॥ 37 ॥

ಕನ್ನಡದಲ್ಲಿ ಅರ್ಥ

ಈ ಜಗತ್ತನ್ನು ಆ ಪರಮಾತ್ಮನೇ ಸೃಷ್ಟಿಮಾಡಿದ. ಈ ಜಗತಿನಲ್ಲಿರುವ ಎಲ್ಲವನ್ನೂ ಆ ಪರಮಾತ್ಮನೇ ಸೃಷ್ಟಿಮಾಡಿದ ಮತ್ತು ಎಲ್ಲದರಲ್ಲೂ ಅವನೇ ಇರುವನೆಂದು ತತ್ವಜ್ಞಾನಿಗಳು ಹೇಳುತ್ತಾರೆ. ಎಲ್ಲವೂ ಅವನ ರೂಪವೇ ಎಂದು ಹೇಳುತ್ತಾರೆ. ಹಾಗಾದರೆ ಎಲ್ಲದರಲ್ಲೂ ಅವನೇ ಅವತರಿಸಿದ್ದಾನೆ ಎಂದಾದರೆ, ಮತ್ತು ಪರಮಾತ್ಮ ನಿತ್ಯನೂ ಸತ್ಯನೂ ಅದಾಗ, ಈ ರೂಪಗಳ ಬದಲಾವಣೆ ಏಕೆ. ಎಲ್ಲ ರೂಪವೂ ಅವನೇ ಆದರೆ, ಅವನು ತನ್ನ ನಿಜ ರೂಪವನ್ನೇಕೆ ತೋರಿಸುವುದಿಲ್ಲ. ಏಕೆ ಅವಿತುಕೊಂಡಿದ್ದಾನೆ? ಎಂದು ಒಂದು ವಿಷಯವನ್ನು ಪ್ರಸ್ತಾಪಮಾಡುತ್ತಾರೆ, ಮಾನ್ಯ ಗುಂಡಪ್ಪನವರು.

ಅರ್ಥ ಮತ್ತು ವ್ಯಾಖ್ಯಾನ

If you say that God incarnates on this world then why does his form change from time to time? Why is he not eager to show clues about himself to us? Why is he hiding? - Mankutimma

ವಿಷಯಗಳು

DevotionLifeSelf

ವೀಡಿಯೊ ವಿಭಾಗ

ವೀಡಿಯೊ ಶೀಘ್ರದಲ್ಲಿ ಬರುತ್ತಿದೆ

ಪಂಡಿತರು ಮತ್ತು ತಜ್ಞರಿಂದ ವಿವರವಾದ ವೀಡಿಯೊ ವಿವರಣೆಗಳು ಶೀಘ್ರದಲ್ಲಿ ಲಭ್ಯವಾಗುತ್ತದೆ.