ಪಟ್ಟಿಗೆ ಹಿಂತಿರುಗಿ

ಕಗ್ಗ 52 - ಮಂಕುತಿಮ್ಮನ ಕಗ್ಗ

ಮಂಕುತಿಮ್ಮನ ಕಗ್ಗ by D.V. Gundappa

ಮೂಲ ಪಠ್ಯ (ಕನ್ನಡ)

ಗಗನನೀಲಿಮೆಯೆನ್ನ ಕಣ್ಗೆ ಸೊಗೆವೀವಂತೆ । ಮುಗಿವ ತರಣಿಯ ರಕ್ತ ಹಿತವೆನಿಸದೇಕೋ! ॥ ಸೊಗದ ಮೂಲವದೆಲ್ಲಿ ನೀಲದೊಳೊ ಕೆಂಪಿನೊಳೊ । ಬಗೆವೆನ್ನ ಮನಸಿನೊಳೊ? - ಮಂಕುತಿಮ್ಮ ॥ ೫೨ ॥

gagana nIlime enna kaNge sogevIvante । mugiva taraNiya rakta hitavenisadu eko! ॥ sogada mUlavadelli nIladoLo kempinoLo । bageva enna manisinoLo? - Mankutimma ॥ 52 ॥

ಕನ್ನಡದಲ್ಲಿ ಅರ್ಥ

ಆಕಾಶದ ತಿಳಿನೀಲಿ ಬಣ್ಣವು ಎನ್ನ ಮನಸ್ಸಿಗೆ ಹಿತವನ್ನು ಕೊಡುತ್ತೆ. ಆದರೆ ಮುಳುಗುವ ಸೂರ್ಯನ ಕೆಂಪು ಬಣ್ಣ ಎನಗೇಕೋ ಹಿತವನ್ನು ಕೊಡುವುದಿಲ್ಲ. ಆ ಹಿತ ಎನ್ನುವುದು ಆಕಾಶದ ನೀಲಿ ಬಣ್ಣದಲ್ಲಿದೆಯೋ ಅಥವಾ ಮುಳುಗುವ ಸೂರ್ಯನ ರಕ್ತ ವರ್ಣದಲ್ಲಿದೆಯೋ ಅಥವಾ ಎರಡೂ ಅಲ್ಲದೆ, ಹಿತವೆಂದು ತಿಳಿಯುವ ನಮ್ಮ ಮನಸ್ಸಿನಲ್ಲಿ ಇದೆಯೋ ಎಂದು ಪ್ರಸ್ತಾಪ ಮಾಡುತ್ತಾರೆ, ಶ್ರೀ ಗುಂಡಪ್ಪನವರು.

ಅರ್ಥ ಮತ್ತು ವ್ಯಾಖ್ಯಾನ

The blue sky in the morning pleases me. For some unknown reason, I don't like the crimson hue of the same sky during sunset. Where is the source of this pleasure? Is it in the blue? or in crimson? or in my mind that differentiates the two? - Mankutimma

ವಿಷಯಗಳು

Nature

ವೀಡಿಯೊ ವಿಭಾಗ

ವೀಡಿಯೊ ಶೀಘ್ರದಲ್ಲಿ ಬರುತ್ತಿದೆ

ಪಂಡಿತರು ಮತ್ತು ತಜ್ಞರಿಂದ ವಿವರವಾದ ವೀಡಿಯೊ ವಿವರಣೆಗಳು ಶೀಘ್ರದಲ್ಲಿ ಲಭ್ಯವಾಗುತ್ತದೆ.