ಪಟ್ಟಿಗೆ ಹಿಂತಿರುಗಿ

ಕಗ್ಗ 78 - ಮಂಕುತಿಮ್ಮನ ಕಗ್ಗ

ಮಂಕುತಿಮ್ಮನ ಕಗ್ಗ by D.V. Gundappa

ಮೂಲ ಪಠ್ಯ (ಕನ್ನಡ)

ತರುಣಿ ತನ್ನೊಡವೆಗಳ ತಳೆಯುತ್ತ ತೆಗೆಯುತ್ತ । ಪರಕಿಸುತೆ ಮುಕರದಲಿ ಸೊಗಸುಗಳ ಪರಿಯ ॥ ಮರೆತೆಲ್ಲವನು ವಿಲಸಿಪಂತೆ ತಾಂ ವಿಶ್ವದಲಿ । ಮೆರೆಯುವನು ಪರಬೊಮ್ಮ - ಮಂಕುತಿಮ್ಮ ॥ ೭೮ ॥

taruNi tanna oDavegaLa taLeyutta tegeyutta । parakisute mukaradali sogasugaLa pariya ॥ maretu ellavanu vilasipante tAm vishvadali । mereyuvanu parabomma - Mankutimma ॥ 78 ॥

ಕನ್ನಡದಲ್ಲಿ ಅರ್ಥ

ಒಂದು ಹೆಣ್ಣು ಹೇಗೆ ತೊಟ್ಟ ಒಡವೆಗಳನ್ನು ತೆಗೆದು ಮತ್ತೆ ತೊಟ್ಟು ಕನ್ನಡಿಯಲಿ ತನ್ನ ಅಂದ ಚೆಂದವನ್ನು ನೋಡಿಕೊಳ್ಳುತ್ತಾ ಮೈ ಮರೆಯುತ್ತಾಳೋ, ಹಾಗೆ ತಾನೆ ಸೃಜಿಸಿದ ಈ ಜಗತ್ತಿನಲ್ಲಿ ಬೇರೆ ಬೇರೆ ದೇಹಗಳನ್ನು ಧರಿಸಿ ಅದರಲ್ಲಿ ಸಿಗುವ ಹತ್ತು ಹಲವಾರು ಭಾವನೆಗಳ ಆನಂದದಿಂದ ಅನುಭವಿಸುತ್ತಾ ಮೈ ಮರೆತಿದ್ದಾನೋ ಏನೋ ಎನ್ನುತ್ತಾರೆ ಮಾನ್ಯ ಗುಂಡಪ್ಪನವರು ಈ ಕಗ್ಗದಲ್ಲಿ. 

ಅರ್ಥ ಮತ್ತು ವ್ಯಾಖ್ಯಾನ

A young girl when alone in a room takes her own time and enjoys - wearing each ornament, looking at herself at various angles and takes it off before moving to the next ornament - next looks, next thrill. Just like that the creator is playing with his creation enjoying one form after another. He seems to be lost while enjoying this process. - Mankutimma

ವಿಷಯಗಳು

NatureSelf

ವೀಡಿಯೊ ವಿಭಾಗ

ವೀಡಿಯೊ ಶೀಘ್ರದಲ್ಲಿ ಬರುತ್ತಿದೆ

ಪಂಡಿತರು ಮತ್ತು ತಜ್ಞರಿಂದ ವಿವರವಾದ ವೀಡಿಯೊ ವಿವರಣೆಗಳು ಶೀಘ್ರದಲ್ಲಿ ಲಭ್ಯವಾಗುತ್ತದೆ.