ಪಟ್ಟಿಗೆ ಹಿಂತಿರುಗಿ

ಕಗ್ಗ 86 - ಮಂಕುತಿಮ್ಮನ ಕಗ್ಗ

ಮಂಕುತಿಮ್ಮನ ಕಗ್ಗ by D.V. Gundappa

ಮೂಲ ಪಠ್ಯ (ಕನ್ನಡ)

ಗಗನ ತಲೆನವಿರಾಗೆ ಪರೆ ತಾರೆ ಹೂವಾಗೆ । ಜಗವೆಲ್ಲ ವಪುವಾಗೆ ಮಾಯೆ ಸತಿಯಾಗೆ ॥ ನಗುನಗುವ ಬೊಬ್ಬಿಡುವ ಜೀವತಾಂಡವ ರಸಿಕ । ಭಗವಂತ ಶಿವರುದ್ರ - ಮಂಕುತಿಮ್ಮ ॥ ೮೬ ॥

gagana talenavirAge pare tAre hUvAge । jagavella vapuvAge mAye satiyAge ॥ nagunaguva bobbiDuva jIvatAndava rasika । bhagavanta shivarudra - Mankutimma ॥ 86 ॥

ಕನ್ನಡದಲ್ಲಿ ಅರ್ಥ

ಈ ಜಗತ್ತನ್ನೇ ದೇಹವನ್ನಾಗಿಸಿಕೊಂಡಿರುವ ಆ ಪರಮಾತ್ಮನು ಆಕಾಶವನ್ನು ತನ್ನ ತಲೆ ಕೂದಲಾಗಿಸಿಕೊಂಡು ಚಂದ್ರ ಮತ್ತು ನಕ್ಷತ್ರಗಳನ್ನು ಹೂವಂತೆ ಆ ಕೂದಲಲ್ಲಿ ಮುಡಿದು ಮಾಯೆಯನ್ನು ತನ್ನ ಸತಿಯಾಗಿಸಿಕೊಂಡು ಈ ಜಗತ್ತಿನಲ್ಲಿ ಸಂತೋಷ ಮತ್ತು ದುಃಖವನ್ನು ಸಮವಾಗಿ ಅನುಭವಿಸಿ ಆನಂದಿಸುತ್ತಿದ್ದಾನೆ. ಹಾಗೆ ಅವನು ಶಾಂತ ಶಿವ ಸ್ವರೂಪನೂ ಹೌದು ಮತ್ತು ಭಯಂಕರವಾದ ರುದ್ರ ಸ್ವರೂಪನೂ ಹೌದು ಎನ್ನುತ್ತಾರೆ ಮಾನ್ಯ ಗುಂಡಪ್ಪನವರು ಈ ಕಗ್ಗದಲ್ಲಿ.

ಅರ್ಥ ಮತ್ತು ವ್ಯಾಖ್ಯಾನ

The sky is the hair-do. The moon and stars are flowers on the head. The world is his body. Maya, the illusion, is his wife. His laughter, roars and dance manifest as life in his creation. He, whom we call as Shiva or Rudra takes delight in his work. - Mankutimma

ವಿಷಯಗಳು

LifeNatureDuty

ವೀಡಿಯೊ ವಿಭಾಗ

ವೀಡಿಯೊ ಶೀಘ್ರದಲ್ಲಿ ಬರುತ್ತಿದೆ

ಪಂಡಿತರು ಮತ್ತು ತಜ್ಞರಿಂದ ವಿವರವಾದ ವೀಡಿಯೊ ವಿವರಣೆಗಳು ಶೀಘ್ರದಲ್ಲಿ ಲಭ್ಯವಾಗುತ್ತದೆ.