ಪಟ್ಟಿಗೆ ಹಿಂತಿರುಗಿ

ಕಗ್ಗ 935 - ಮಂಕುತಿಮ್ಮನ ಕಗ್ಗ

ಮಂಕುತಿಮ್ಮನ ಕಗ್ಗ by D.V. Gundappa

ಮೂಲ ಪಠ್ಯ (ಕನ್ನಡ)

ಮೆಣಸು ಹಿಪ್ಪಲಿ ಶುಂಠಿ ಜೀರಿಗೆಗಳೆಲ್ಲ ಸರಿ । ಅನುವಪ್ಪುದೊಂದೊಂದು ರೋಗಕೊಂದೊಂದು ॥ ನಿನಗಮಂತೆಯೆ ನೂರು ನೀತಿಸೂತ್ರಗಳಿರಲು । ಅನುವನರಿವುದೆ ಜಾಣು - ಮಂಕುತಿಮ್ಮ ॥ ೯೩೫ ॥

meNasu hippali shunThi jIrigegaLella sari । anuvappudu ondondu rOgake ondondu ॥ ninagam anteye nUru nIti sUtragaLu iralu । anuvan arivude jANu - Mankutimma ॥ 935 ॥

ಕನ್ನಡದಲ್ಲಿ ಅರ್ಥ

ಮೆಣಸು ಹಿಪ್ಪಲಿ ಶುಂಠಿ ಜೀರಿಗೆ ಮುಂತಾದ ಪದಾರ್ಥಗಳು ಔಷಧೀಯ ಗುಣಗಳನ್ನು ಹೊಂದಿದ್ದು, ನಮ್ಮ ದೇಹದ ಒಂದೊಂದು ರೋಗಕ್ಕೆ ಒಂದೊಂದು ಔಷಧಿಯಂತೆ ಸೂಕ್ತವಾಗಿರುತ್ತವೆ. ಅದೇ ರೀತಿ ನಮ್ಮ ಮಾನಸಿಕ ಮತ್ತು ಆಧ್ಯಾತ್ಮಿಕ ರುಗ್ಣತೆ ಅಥವಾ ಖಾಯಿಲೆಯನ್ನು ವಾಸಿಮಾಡಲು ನೂರಾರು ನೀತಿ ಸೂತ್ರಗಳು ಇರುವಾಗ, ನಿನಗೆ ಸೂಕ್ತವಾದದ್ದನ್ನು ಆರಿಸಿಕೊಳ್ಳುವುದೇ ಜಾಣತನ ಎಂದು ಉಲ್ಲೇಖಮಾಡಿದ್ದಾರೆ ಮಾನ್ಯ ಗುಂಡಪ್ಪನವರು ಈ ಮುಕ್ತಕದಲ್ಲಿ.

ಅರ್ಥ ಮತ್ತು ವ್ಯಾಖ್ಯಾನ

There are so many herbs - pepper, long pepper, ginger, cummins. All of them are medicines. Each ailment is different and requires different medicine. Just like that, you have so many formulas to help you when you are faced with moral dilemmas. You are considered wise if you know when to apply what formula. - Mankutimma

ವಿಷಯಗಳು

Society

ವೀಡಿಯೊ ವಿಭಾಗ

ವೀಡಿಯೊ ಶೀಘ್ರದಲ್ಲಿ ಬರುತ್ತಿದೆ

ಪಂಡಿತರು ಮತ್ತು ತಜ್ಞರಿಂದ ವಿವರವಾದ ವೀಡಿಯೊ ವಿವರಣೆಗಳು ಶೀಘ್ರದಲ್ಲಿ ಲಭ್ಯವಾಗುತ್ತದೆ.